Monday, December 22, 2025

ತುಂಗಾ ನದಿಯಲ್ಲಿ ಸ್ನೇಹಿತರ ಜತೆ ಈಜಲು ತೆರಳಿದ್ದ ಯುವಕ ವಾಪಾಸ್‌ ಬರಲೇ ಇಲ್ಲ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಪಿಳ್ಳಂಗಿರಿ ಗ್ರಾಮದಲ್ಲಿ ನಡೆದಿದೆ.

ಮೃತನನ್ನು ಶಿವಮೊಗ್ಗ ನಗರದ ಪ್ರೇಮ್ ಕುಮಾರ್ (17) ಎಂದು ಗುರುತಿಸಲಾಗಿದೆ. ಈತ ಸ್ನೇಹಿತರ ಜೊತೆ ಪಿಳ್ಳಂಗಿರಿಯ ದೇವಸ್ಥಾನಕ್ಕೆ ತೆರಳಿದ್ದ. ವಾಪಾಸ್‌ ಆಗುವಾಗ ಸ್ನೇಹಿತರ ಜೊತೆ ಈಜಲು ನದಿಗೆ ಇಳಿದಿದ್ದ. ಈ ವೇಳೆ ಮುಳುಗಿ ಸಾವನ್ನಪ್ಪಿದ್ದಾನೆ.

ಪ್ರೇಮ್‌ ಡಿವಿಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ

error: Content is protected !!