ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕಾರು ಮತ್ತು ರಿಕ್ಷಾ ನಡುವೆ ಪರಸ್ಪರ ಡಿಕ್ಕಿ ಹೊಡೆದು ಓರ್ವ ಮಹಿಳಾ ಪ್ರಯಾಣಿಕೆ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮೆಲ್ಲಾರ್ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಕೋಟೆಕಣಿ ಎಂಬಲ್ಲಿ ನಡೆದಿದೆ.
ಕೋಟೆಕಣಿ ಒಳರಸ್ತೆಯಿಂದ ಮುಖ್ಯರಸ್ತೆಗೆ ಬರುವ ವೇಳೆ ಮುಖ್ಯರಸ್ತೆಯಲ್ಲಿ ಬರುತ್ತಿದ್ದ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.
ಕಂಚಿನಡ್ಕ ಪದವು ನಿವಾಸಿ ಅಸಿಯಮ್ಮ ( 65) ಅವರು ಗಂಭೀರ ಗಾಯಗೊಂಡ ಮಹಿಳೆಯಾಗಿದ್ದು , ಇವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಹಿನಾದ್ ಹಾಗೂ ಅಲ್ತಫ್ ಮತ್ತು ರಿಕ್ಷಾ ಚಾಲಕ ಶಹೀದ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯ ಪೋಲೀಸರು ಭೇಟಿ ನೀಡಿದ್ದಾರೆ.