ಮದುರೈ ರೈಲು ದುರಂತ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮದುರೈ ರೈಲು ನಿಲ್ದಾಣದಲ್ಲಿ ಸಂಭವಿಸಿದ ರೈಲು ದುರಂತದಲ್ಲಿ 9 ಪ್ರಯಾಣಿಕರು ಮೃತಪಟ್ಟಿದ್ದು, ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ.

ಅಕ್ರಮವಾಗಿ ತರಲಾಗಿದ್ದ ಗ್ಯಾಸ್ ಸಿಲಿಂಡರ್‌ ಸ್ಫೋಟಗೊಂಡಿರುವುದೇ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ. ದುರ್ಘಟನೆಯಲ್ಲಿ 9 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಮೃತರಲ್ಲಿ ಆರು ಜನರ ಉತ್ತರ ಪ್ರದೇಶದವರಾಗಿದ್ದು, ರಾಮೇಶ್ವರಂಗೆ ಬಂದಿದ್ದರು.

ಘಟನೆ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಬರೆದುಕೊಂಡಿರುವ ದ್ರೌಪದಿ ಮುರ್ಮು, ಘಟನೆಯಿಂದ ತೀವ್ರ ನೋವಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!