ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಪಕ್ಷ ಮೈತ್ರಿಕೂಟದ ನಾಯಕರ ಮೂರನೇ ಸಭೆ ಆಗಸ್ಟ್ 31ರಂದು ಮುಂಬೈನಲ್ಲಿ ನಡೆಯಲಿದ್ದು, ಆಗಸ್ಟ್ 31 ರಂದು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟದ ಲಾಂಛನ ಅನಾವರಣಗೊಳಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮುಖಂಡ ಅಶೋಕ್ ಚವಾಣ್ ಶನಿವಾರ ಹೇಳಿದ್ದಾರೆ.
ಮುಂಬೈನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಶೋಕ್ ಚವಾಣ್, ಸುಮಾರು 26 ರಿಂದ 27 ಪಕ್ಷಗಳು ಸಭೆಯಲ್ಲಿ ಭಾಗವಹಿಸಲಿವೆ. ಆಗಸ್ಟ್ 31ರ ಸಂಜೆ ಮುಂಬೈನಲ್ಲಿ ಅನೌಪಚಾರಿಕ ಸಭೆ ಮತ್ತು ಸೆಪ್ಟೆಂಬರ್ 1ರಂದು ಔಪಚಾರಿಕ ಸಭೆ ನಡೆಯಲಿದೆ.