ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಎಪಿ ಸಂಸದ ರಾಘವ್ ಚಡ್ಡಾ ಮತ್ತು ನಟಿ ಪರಿಣಿತಿ ಚೋಪ್ರಾ ಮಧ್ಯಪ್ರದೇಶದ ಪ್ರಸಿದ್ಧ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು. ಶ್ರಾವಣ ಮಾಸದ ನಿಮಿತ್ತ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾಲಯದೊಳಗೆ ಭಾವೀ ದಂಪತಿ ಕುಳಿತಿರುವ ಫೋಟೋಗಳು ಮತ್ತು ವೀಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.
ಸಾಂಪ್ರದಾಯಿಕ ಉಡುಗೆಯಲ್ಲಿ ದೇವಸ್ಥಾನಕ್ಕೆ ಬಂದ ಇಬ್ಬರು ಪೂಜೆ ಸಲ್ಲಿಸಿ ಅರ್ಚಕರ ಆಶೀರ್ವಾದ ಪಡೆದರು. ದೇವಸ್ಥಾನದ ಅರ್ಚಕ ಯಶ್ ಗುರು ನೇತೃತ್ವದಲ್ಲಿ ಪೂಜೆಗಳು ನಡೆದವು.
ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಅವರು ಉಜ್ಜಯಿನಿಗೆ ಹೋಗುವ ಮೊದಲು ಅಮೃತಸರದ ಗೋಲ್ಡನ್ ಟೆಂಪಲ್‌ಗೂ ಭೇಟಿ ನೀಡಿದರು. ಗುರುದ್ವಾರದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ಈ ಜೋಡಿ ತಮ್ಮ ಪ್ರವಾಸದ ಫೋಟೋಗಳನ್ನು ತಮ್ಮ ವೈಯಕ್ತಿಕ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಈ ವರ್ಷದ ಆರಂಭದಲ್ಲಿ ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಉದಯಪುರದ ಒಬೆರಾಯ್ ಉದಯವಿಲಾಸ್‌ನಲ್ಲಿ ಶೀಘ್ರದಲ್ಲೇ ಅವರ ಮದುವೆ ನಡೆಯಲಿದೆಯಂತೆ.