ಚಿನ್ನ ಗೆದ್ದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚಿನ್ನದ ಪದಕ ಗೆದ್ದ ಭಾರತದ ಅಂಧರ ಮಹಿಳಾ ಕ್ರಿಕೆಟ್ ತಂಡಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾನುವಾರ ಅಭಿನಂದನೆಗಳನ್ನು ತಿಳಿಸಿದರು. ಪಂದ್ಯಾವಳಿಯಲ್ಲಿ ಅಸಾಧಾರಣ ಪ್ರದರ್ಶನಕ್ಕಾಗಿ ನಮಗೆ ಹೃದಯಪೂರ್ವಕ ಧನ್ಯವಾದಗಳು ಎಂದು ಟ್ವೀಟ್‌ ಮಾಡಿದ್ದಾರೆ.

“ಅಂಧರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿ ಚಿನ್ನದ ಪದಕ ಗೆದ್ದ ಭಾರತೀಯ ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು! IBSA ವಿಶ್ವ ಕ್ರೀಡಾಕೂಟದಲ್ಲಿ ಅಂಧರ ಕ್ರಿಕೆಟ್‌ನ ಮೊದಲ ಆವೃತ್ತಿಯಲ್ಲಿ ಐತಿಹಾಸಿಕ ಮತ್ತು ಸ್ಪೂರ್ತಿದಾಯಕ ಪ್ರದರ್ಶನಕ್ಕಾಗಿ ರಾಷ್ಟ್ರವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ” ಎಂದು ಬರೆದುಕೊಂಡಿದ್ದಾರೆ.

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಭಾರತ 9 ವಿಕೆಟ್‌ಗಳಿಂದ ಆಸ್ಟ್ರೇಲಿಯಾ ವಿರುದ್ಧದ ಹಣಾಹಣಿಯಲ್ಲಿ ಮೇಲುಗೈ ಸಾಧಿಸಿತು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮಹಿಳಾ ತಂಡವು 20 ಓವರ್‌ಗೆ 114 ರನ್ ಕಲೆ ಹಾಕಿತು. ಭಾರತ ವನಿತೆಯರು ಡಿಎಲ್ಎಸ್ ನಿಯಮದಡಿ 3.3 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 43 ರನ್ ಬಾರಿಸಿ 9 ವಿಕೆಟ್ ಭರ್ಜರಿ ಗೆಲುವು ಸಾಧಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!