ಹೊಸದಿಗಂತ ಡಿಜಿಟಲ್ ಡೆಸ್ಕ್:
ಟಿಡಿಪಿ ಪಕ್ಷದ ನಾಯಕ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ದಿವಂಗತ ನಂದಮೂರಿ ತಾರಕ ರಾಮರಾವ್ (ಎನ್ಟಿಆರ್) ಅವರ ಶತಮಾನೋತ್ಸವದಂದು 100ರೂ. ಸ್ಮರಣಾರ್ಥ ನಾಣ್ಯವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಬೆಳಗ್ಗೆ ಬಿಡುಗಡೆ ಮಾಡಿದರು.
ದೆಹಲಿಯ ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಎನ್ಟಿಆರ್ ಕುಟುಂಬ ಸದಸ್ಯರು ಭಾಗವಹಿಸಿದ್ದರು.
ಸ್ಮರಣಾರ್ಥ ನಾಣ್ಯ ಬಿಡುಗಡೆ ಕಾರ್ಯಕ್ರಮದಲ್ಲಿ ದಗ್ಗುಬಾಟಿ ವೆಂಕಟೇಶ್ವರ ರಾವ್, ನಂದಮೂರಿ ಬಾಲಕೃಷ್ಣ, ಎಪಿ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ, ನಂದಮೂರಿ ಕುಟುಂಬಸ್ಥರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಚಿತ್ರರಂಗ ಮತ್ತು ರಾಜಕೀಯ ಗಣ್ಯರು ಸೇರಿ ಸುಮಾರು 200 ಅತಿಥಿಗಳು ಭಾಗವಹಿಸಿದ್ದರು. ಈ ನಾಣ್ಯ ಬಿಡುಗಡೆ ಕಾರ್ಯಕ್ರಮಕ್ಕೆ ಜ್ಯೂ ಎನ್ಟಿಆರ್ ಅವರನ್ನು ಆಹ್ವಾನಿಸಲಾಗಿತ್ತಾದರೂ ‘ದೇವರ’ ಸಿನಿಮಾ ಶೂಟಿಂಗ್ನಲ್ಲಿ ಬ್ಯುಸಿಯಾಗಿರುವುದರಿಂದ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
NTR #NandamuriTarakaRamarao ₹100 Coin officially launched by the President of India at Rashtrapati Bhavan, Delhi in the presence of family members 🔥🔥
JOHAR NTR JOHAR NTR 🙏
— Meg 'NTR' (@meghanath9999) August 28, 2023