ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಕ್ಕೆ ಶಾಕ್ ಎದುರಾಗಿದೆ. ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ.
ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಮುಂದಿನ 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ.
ಕರ್ನಾಟಕ ಸಧ್ಯ ಪ್ರತಿ ದಿನ 1,900 ಕ್ಯೂಸೆಕ್ ನೀರು ಹರಿಸುತ್ತಿದೆ. ಆದರೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಹೆಚ್ಚುವರಿಯಾಗಿ 3,100 ಕ್ಯೂಸೆಕ್ ನೀರು ಹರಿಸಲು ಸೂಚಿಸಿದೆ. ಬಿಳಿಗುಂಡ್ಳು ಮಾಪನ ಕೇಂದ್ರದಲ್ಲಿ 5000 ಕ್ಯೂಸೆಕ್ ನೀರು ದಾಖಲಾಗಬೇಕು ಹಾಗಾಗಿ ಹೆಚ್ಚುವರಿ ನೀರು ಹರಿಸುವುದು ಅನಿವಾರ್ಯ ಎಂದು ತಿಳಿಸಿದೆ.
ನಾಳೆ ದೆಹಲಿಯಲ್ಲಿ CWMA ಸಭೆ ನಡೆಯಲಿದ್ದು, ಸಭೆಯಲ್ಲಿ ಕರ್ನಾಟಕ ಅಷ್ಟು ನೀರು ಬಿಡಲು ಸಾಧ್ಯವಿಲ್ಲ ಎಂದು ವಾದಿಸಲಿದೆ. ನಾಳಿನ ಸಭೆಯಲ್ಲಿ ಅಂತಿಮ ತೀರ್ಮಾನ ಏನಿರಲಿದೆ ಎಂಬುದನ್ನು ಕಾದುನೋಡಬೇಕಿದೆ.