JOB| ಕೆಪಿಎಸ್‌ಸಿ ನೇಮಕಾತಿ: 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಸೆಪ್ಟೆಂಬರ್‌ 30,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಸೆಪ್ಟೆಂಬರ್‌ 30,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!