ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯಲ್ಲಿ 77 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಎಂಬಿಬಿಎಸ್, ಬಿಎಎಂಎಸ್, ಬಿಯುಎಂಎಸ್, ಡಿಪ್ಲೋಮಾ, ಬಿ.ಎಸ್ಸಿ, ಎಂ.ಎಸ್ಸಿ, 12ನೇ ತರಗತಿ, 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಸಮಾಜ ಕಾರ್ಯಕರ್ತರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 12,303/- ರಿಂದ 1,10,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 31,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.