ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಗ್ರಾಹಕರಿಗೆ ಭರ್ಜರಿ ಗಿಫ್ಟ್ ನೀಡಿದ್ದು,. ಆಗಸ್ಟ್ 30 ರಿಂದ 14 ಕೆಜಿ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಮೂಲಗಳ ಪ್ರಕಾರ ಆಗಸ್ಟ್ 30 ರಿಂದ 200 ರೂಪಾಯಿ ಇಳಿಕೆಯಾಗಲಿದೆ. ಕೇಂದ್ರ ಕ್ಯಾಬಿನೆಟ್ ಸಿಲಿಂಡರ್ ಇಳಿಕೆಗೆ ಅನುಮತಿ ನೀಡಿದೆ.
ಸದ್ಯ 14.2 ಕೆಜಿ ಅಡುಗೆ ಗ್ಯಾಸ್ ಸಿಲಿಂಡರ್ ಬೆಲೆ ಕರ್ನಾಟಕದಲ್ಲಿ 1,105.50 ರೂಪಾಯಿ ಇದ್ದರೆ, ದೆಹಲಿಯಲ್ಲಿ 1053, ಮುಂಬೈನಲ್ಲಿ 1052.50 ರೂಪಾಯಿ, ಚೆನ್ನೈನಲ್ಲಿ 1079 ರೂಪಾಯಿ ದರವಿದೆ. ಈ ಬೆಲೆಯಲ್ಲಿ 200 ರೂಪಾಯಿ ಕಡಿತಗೊಳ್ಳಲಿದೆ ಎಂದು ವರದಿಯಾಗಿದೆ. ಜುಲೈ ತಿಂಗಳಲ್ಲಿ 50 ರೂಪಾಯಿ ಏರಿಕೆ ಕಂಡಿದ್ದರೆ, ಮೇ ತಿಂಗಳಲ್ಲಿ 2 ಬಾರಿ ದರ ಏರಿಕೆಯಾಗಿತ್ತು.
ಇತ್ತ ಚತ್ತೀಸಘಡ, ರಾಜಸ್ಥಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಮಿಜೋರಾಂನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಮಾಡಲಾಗಿದೆ ಅನ್ನೋ ಮಾತುಗಳು ಕೇಳಿಬಂದಿದೆ.
ಇನ್ನು ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕೂಡ ಇಳಿಕೆಯಾಗುವ ಸಾಧ್ಯತೆ ಇದೆ. 19 ಕೆಜಿ ವಾಣಿಜ್ಯ ಗ್ಯಾಸ್ ಬೆಲೆ 99.75 ರೂಪಾಯಿ ಇಳಿಕೆಯಾಗಲಿದೆ. ಕಮರ್ಷಿಯಲ್ ಸಿಲಿಂಡರ್ ಬೆಲೆ ಆಗಸ್ಟ್ 1 ರಿಂದ ಇಳಿಕೆಯಾಗಲಿದೆ. ಸದ್ಯ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 2190.5 ರೂಪಾಯಿ ಇದೆ. ಆಗಸ್ಟ್ 1 ರಿಂದ ಈ ಬೆಲೆಯೂ ಪರಿಷ್ಕರಣೆಗೊಳ್ಳಲಿದೆ ಎನ್ನಲಾಗುತ್ತಿದೆ.