ನಾಳೆಯಿಂದ ಏಷ್ಯಾಕಪ್ ಶುರು: ಶ್ರೀಲಂಕಾ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಏಷ್ಯಾಕಪ್ ಬುಧವಾರದಿಂದ (ಆಗಸ್ಟ್ 30) ಶುರುವಾಗಲಿದ್ದು, ಇದಕ್ಕೂ ಮುನ್ನ ಶ್ರೀಲಂಕಾ ತಂಡವನ್ನು (Sri Lanka Squad) ಪ್ರಕಟಿಸಿದೆ .

15 ಸದಸ್ಯರ ತಂಡದಿಂದ ಪ್ರಮುಖ ಆಟಗಾರರಾದ ವನಿಂದು ಹಸರಂಗ, ದುಷ್ಮಂತ ಚಮೀರಾ, ದಿಲ್ಶನ್ ಮಧುಶಂಕ ಹಾಗೂ ಲಹಿರು ಕುಮಾರ ಹೊರಗುಳಿದಿದ್ದಾರೆ. ಈ ನಾಲ್ವರು ಆಟಗಾರರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ದಸುನ್ ಶಾನಕ ತಂಡ ಮುನ್ನಡೆಸಲಿದ್ದು, ಕುಸಾಲ್ ಮೆಂಡಿಸ್ ಉಪನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ತಂಡದಲ್ಲಿ ಸ್ಟಾರ್ ಆಟಗಾರರಾಗಿ ಮಹೇಶ್ ತೀಕ್ಷಣ, ಮಥೀಶ ಪತಿರಾಣ, ಚರಿತ್ ಅಸಲಂಕಾ, ಪಾತುಮ್ ನಿಸ್ಸಂಕಾ ಸ್ಥಾನ ಪಡೆದಿದ್ದಾರೆ.

ಏಷ್ಯಾಕಪ್​ಗೆ ಶ್ರೀಲಂಕಾ ತಂಡ: ದಸುನ್ ಶಾನಕ (ನಾಯಕ), ಪಾತುಮ್ ನಿಸ್ಸಾಂಕ, ದಿಮುತ್ ಕರುಣಾರತ್ನೆ, ಕುಸಾಲ್ ಪೆರೇರ, ಕುಸಾಲ್ ಮೆಂಡಿಸ್ (ಉಪನಾಯಕ), ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ಸದೀರ ಸಮರವಿಕ್ರಮ, ಮಹೀಶ್ ತೀಕ್ಷಣ, ದುನಿತ್ ವೆಲ್ಲಲಗೆ, ಮಥೀಶ ಪತಿರಾಣ, ಕಸುನ್ ರಜಿತ, ದುಶನ್ ಹೇಮಂತ, ಬಿನೂರ ಫರ್ನಾಂಡೊ, ಪ್ರಮೋದ್ ಮಧುಶನ್.

ಏಷ್ಯಾಕಪ್ ಬುಧವಾರದಿಂದ (ಆಗಸ್ಟ್ 30) ಶುರುವಾಗಲಿದ್ದು, ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ನೇಪಾಳ ತಂಡಗಳು ಸೆಣಸಲಿದೆ. ಇನ್ನು 2ನೇ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಶ್ರೀಲಂಕಾ ಕಣಕ್ಕಿಳಿಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!