ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಪಿಂಗ್ ಮಾಲ್‌ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಶ್ರೀಕಾಕುಳಂ ಜಿಲ್ಲೆಯಲ್ಲಿ ನಡೆದಿದೆ. ಹಳೇ ಪಾಟ್ನಾದ ಮುಖ್ಯ ರಸ್ತೆಯಲ್ಲಿರುವ ಸ್ನೇಹ ಶಾಪಿಂಗ್ ಮಾಲ್‌ನಲ್ಲಿ ಅಗ್ನಿ ಅವಘಡ ನಡೆದಿದ್ದು, ಮಾಹಿತಿ ಪಡೆದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು.
ಶಾಪಿಂಗ್ ಮಾಲ್‌ನಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಎರಡು ಅಗ್ನಿಶಾಮಕ ವಾಹನಗಳ ಮೂಲಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಶಾಪಿಂಗ್ ಮಾಲ್‌ನಲ್ಲಿದ್ದ ಬಟ್ಟೆ ಮತ್ತು ಪೀಠೋಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಭಾರಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಎಲ್ಲಾ ಕಡೆ ಆವರಿಸಿಕೊಂಡಿತ್ತು. ಮಾಲ್‌ನಲ್ಲಿ ಯಾರೋ ಇಲ್ಲವಾದ್ದರಿಂದ ಪ್ರಾಣಾಪಾಯ ತಪ್ಪಿದೆ. ಆದರೆ ಭಾರೀ ಆಸ್ತಿ ನಷ್ವಾಗಿರುವುದಾಗಿ ಹೇಳಲಾಗಿದೆ.
ಶಾಪಿಂಗ್ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಕುರಿತು ತನಿಖೆ ನಡೆಸಲಾಗುತ್ತಿದೆ.