ಸುಟ್ಟು ಭಸ್ಮವಾದ ಪುಣೆಯ ಹಾರ್ಡ್ ವೇರ್ ಶಾಪ್: ನಾಲ್ವರು ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಎಲೆಕ್ಟ್ರಿಕ್ ಮತ್ತು ಹಾರ್ಡ್‌ವೇರ್‌ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್‌ನ ಪೂರ್ಣನಗರ ಪ್ರದೇಶದಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಎಲೆಕ್ಟ್ರಿಕ್ಸ್‌ ಮತ್ತು ಹಾರ್ಡ್‌ವೇರ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಬಳಿಕ ಬೆಂಕಿಯನ್ನು ನಿಯಂತ್ರಿಸುವಲ್ಲಿ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಈ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನ ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಕಿಯಿಂದ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!