ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ಅಮಾನುಷವಾಗಿ ದಾಳಿ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಹೊಸೂರಿನಲ್ಲಿ ಭಾನುವಾರ ಶಾಲಾ ವಿದ್ಯಾರ್ಥಿನಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ದಾರಿಹೋಕರು ಬಾಲಕಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ.
ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿನ ಮೇಲೆ ಮೂರು ನಾಯಿಗಳು ದಾಳಿ ಮಾಡಿ ಕಚ್ಚಿ ಎಳೆದೊಯ್ಯುತ್ತಿರುವ ದೃಶ್ಯಗಳು ವಿಡಿಯೋದಲ್ಲಿ ಕಂಡುಬರುತ್ತಿವೆ. ದಾರಿಹೋಕರೊಬ್ಬರು ನಾಯಿಗಳನ್ನು ಓಡಿಸಿ ಬಾಲಕಿಯನ್ನು ರಕ್ಷಿಸಿದ್ದಾರೆ.
ನಾಯಿಗಳು ಮಗುವಿನ ಮೇಲೆ ದಾಳಿ ಮಾಡುತ್ತಿರುವ ದೃಶ್ಯಗಳನ್ನು ನೋಡಿದ ನೆಟ್ಟಗರು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಬೀದಿನಾಯಿಗಳ ಸಮಸ್ಯೆ ನಿವಾರಣೆಗೆ ಸ್ಥಳೀಯಾಡಳಿತವನ್ನು ಒತ್ತಾಯಿಸಲಾಗುತ್ತಿದೆ.