Monday, December 22, 2025

ಪಾಟ್ನಾದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ ನಡೆಸಿದ ದುಷ್ಕರ್ಮಿಗಳು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಾಟ್ನಾದ ಹೊರವಲಯದ ಮೊಕಾಮಾದಲ್ಲಿ ಬ್ಯೂಟಿ ಪಾರ್ಲರ್ ಮಾಲಕಿ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ.

40 ವರ್ಷದ ಮಹಿಳೆ ಭಾನುವಾರ ರಾತ್ರಿ ತನ್ನ ಪಾರ್ಲರ್ ಮುಚ್ಚಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬೈಕಿನಲ್ಲಿ ಬಂದ ಇಬ್ಬರು ಪುರುಷರು ಮಹಿಳೆಯ ಮೇಲೆ ಆಸಿಡ್ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸಿಡ್ ದಾಳಿಯಲ್ಲಿ ಮಹಿಳೆಯ ಮುಖದ ಮೇಲೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿವೆ. ಸ್ಥಳೀಯರು ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ” ಎಂದು ಬಾರ್ಹ್‌ನ ಎಸ್‌ಡಿಪಿಒ ಆನಂದ್ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ.

ಘಟನೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಲಾಗಿದ್ದು, ಆಸಿಡ್ ದಾಳಿ ನಡೆಸಿದ ವ್ಯಕ್ತಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅವರು ಹೇಳಿದರು.

error: Content is protected !!