Monday, December 22, 2025

ಕೆಂಗೇರಿ, ಹೆಜ್ಜಾಲ ರೈಲ್ವೇ ನಿಲ್ದಾಣಗಳ ಮಧ್ಯೆ ಗರ್ಡರ್‌ ಅಳವಡಿಕೆ : ರೈಲುಗಳ ಸೇವೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೆಂಗೇರಿ ಮತ್ತು ಹೆಜ್ಜಾಲ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಸಂಖ್ಯೆ 16ರಲ್ಲಿ ತಾತ್ಕಾಲಿಕ ಗರ್ಡರ್ ಅಳವಡಿಕೆ ಹಾಗೂ ತೆರವುಗೊಳಿಸುವ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಕೆಲ ರೈಲು ಸೇವೆಗಳನ್ನು ರದ್ದುಗೊಳಿಸಲಾಗುತ್ತದೆ.

ಡಿಸೆಂಬರ್ 25 ಮತ್ತು ಜನವರಿ 8 ರಂದು ಅರಸೀಕೆರೆ–ಮೈಸೂರು ದೈನಂದಿನ ಪ್ಯಾಸೆಂಜರ್ (56265), ಮೈಸೂರು–ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ ಸ್ಪೆಷಲ್ (06269) ಹಾಗೂ ಎಸ್ಎಂವಿಟಿ ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸ್ಪೆಷಲ್ (06270) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತದೆ.

ಡಿಸೆಂಬರ್ 26 ಮತ್ತು ಜನವರಿ 9 ರಂದು ಮೈಸೂರು–ಅರಸೀಕೆರೆ ಪ್ಯಾಸೆಂಜರ್ (56266) ಮತ್ತು ಕೆಎಸ್ಆರ್ ಬೆಂಗಳೂರು–ಚನ್ನಪಟ್ಟಣ ಮೆಮು (66535) ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗುತ್ತದೆ.

ಡಿಸೆಂಬರ್ 25 ಮತ್ತು ಜನವರಿ 8 ರಂದು ಹೊರಡುವ ಈ ಕೆಳಗಿನ ರೈಲುಗಳ ಪ್ರಯಾಣವನ್ನು ಭಾಗಶಃ ರದ್ದುಗೊಳಿಸಲಾಗುತ್ತದೆ. ರೈಲು ಸಂಖ್ಯೆ 06526 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ರೈಲು ಚನ್ನಪಟ್ಟಣ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ಚನ್ನಪಟ್ಟಣದಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲು ಸಂಖ್ಯೆ 16022 ಅಶೋಕಪುರಂ – ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್‌ ರೈಲು ಅಶೋಕಪುರಂ ಮತ್ತು ಬೆಂಗಳೂರು ನಡುವೆ ರದ್ದಾಗಿದ್ದು, ನಿಗದಿತ ಸಮಯಕ್ಕೆ ಅಶೋಕಪುರಂ ಬದಲಿಗೆ ಕೆಎಸ್ಆರ್ ಬೆಂಗಳೂರಿನಿಂದಲೇ ಪ್ರಯಾಣ ಆರಂಭಿಸಲಿದೆ. ರೈಲು ಸಂಖ್ಯೆ 66580 ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ರೈಲು ರಾಮನಗರಂ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ರದ್ದಾಗಲಿದ್ದು, ರಾಮನಗರಂನಲ್ಲಿ ತನ್ನ ಸಂಚಾರ ಮೊಟಕುಗೊಳಿಸಲಿದೆ.

ಡಿಸೆಂಬರ್ 26  ಮತ್ತು ಜನವರಿ 9  ರಂದು ರೈಲು ಸಂಖ್ಯೆ 66579 ಕೆಎಸ್ಆರ್ ಬೆಂಗಳೂರು-ಅಶೋಕಪುರಂ ಮೆಮು ರೈಲು ಕೆಎಸ್ಆರ್ ಬೆಂಗಳೂರು ಮತ್ತು ರಾಮನಗರಂ ನಡುವೆ ಭಾಗಶಃ ರದ್ದಾಗಲಿದ್ದು, ಬೆಂಗಳೂರಿನ ಬದಲಿಗೆ ರಾಮನಗರಂದಿಂದಲೇ ನಿಗದಿತ ಸಮಯದಲ್ಲಿ ಹೊರಡಲಿದೆ.

error: Content is protected !!