ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆನಾಡಿಗರ ಬಹು ದಿನಗಳ ಬೇಡಿಕೆ ಈಡೇರಿದೆ. ಇಂದಿನಿಂದ ಶಿವಮೊಗ್ಗದ ನೂತನ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಪ್ರಾರಂಭವಾಗಲಿದೆ.
ಇಂದು (ಗುರುವಾರ) ಬೆಳಗ್ಗೆ ಬೆಂಗಳೂರಿನಿಂದ ಇಂಡಿಗೋ ವಿಮಾನ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಇಂದು ಬೆಳಗ್ಗೆ 9:50ಕ್ಕೆ ಇಂಡಿಗೋ 6E 7731 ವಿಮಾನವು ಹೊರಟು, ಕುವೆಂಪು ವಿಮಾನ ನಿಲ್ದಾಣಕ್ಕೆ ಸುಮಾರು 11:05ಕ್ಕೆ ತಲುಪಲಿದೆ. ಈ ಮೂಲಕ ನಾಗರಿಕ ವಿಮಾನ ಹಾರಾಟ ಪ್ರಥಮವಾಗಿ ಪ್ರಾರಂಭವಾಗಲಿದೆ.
ಇಂಡಿಗೋ ವಿಮಾನ 6E 77312 ವಿಮಾನವು ಕುವೆಂಪು ವಿಮಾನ ನಿಲ್ದಾಣದಿಂದ 11:25 ಕ್ಕೆ ಹೊರಟು 12:25 ಕ್ಕೆ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹಿಂತಿರುಗಲಿದೆ.