ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 63 ಮಂದಿ ಮೃತಪಟ್ಟಿರುವ ದುರಂತ ಘಟನೆ ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ನಡೆದಿದೆ.
ಕಟ್ಟಡವೊಂದರಲ್ಲಿ ಗುರುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಅಲ್ಲಿದ್ದ 63 ಮಂದಿ ಸಜೀವ ದಹನಗೊಂಡಿದ್ದು, 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರಿದಿದ್ದು, ಸಾವು ನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಹೇಳಲಾಗಿದೆ.
ಈ ಅವಘಡದ ಹಿಂದಿನ ಪ್ರಮುಖ ಕಾರಣ ಇನ್ನೂ ತಿಳಿದುಬಂದಿಲ್ಲ. ಈವರೆಗೆ ಕಟ್ಟಡದಿಂದ 52 ಶವಗಳನ್ನು ಹೊರತೆಗೆಯಲಾಗಿದೆ ಎಂದು ತುರ್ತು ಸೇವೆಗಳ ವಕ್ತಾರ ರಾಬರ್ಟ್ ಮುಲೌಡ್ಜಿ ತಿಳಿಸಿದ್ದಾರೆ.