ಹೊಸದಿಗಂತ ಡಿಜಿಟಲ್ ಡೆಸ್ಕ್:
ಏಷ್ಯಾಕಪ್ನ 2ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ (Sri Lanka) ತಂಡವು ಜಯ ಸಾಧಿಸಿದೆ.
ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ (Bangladeshಮೊದಲು ಬ್ಯಾಟಿಂಗ್ ಮಾಡಿತು. 42.4 ಓವರ್ಗಳಲ್ಲಿ 164 ರನ್ಗಳಿಗೆ ಆಲೌಟ್ ಆಯಿತು.
165 ರನ್ಗಳ ಸುಲಭ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯುವ ವೇಗಿ ತಸ್ಕಿನ್ ಅಹ್ಮದ್ ಯಶಸ್ವಿಯಾಗಿದ್ದರು. ಮೂರನೇ ಓವರ್ನ ಮೊದಲ ಎಸೆತದಲ್ಲಿ ದಿಮುತ್ ಕರುಣರತ್ನೆ (1) ವಿಕೆಟ್ ಪಡೆದು ಮೊದಲ ಯಶಸ್ಸು ತಂದುಕೊಟ್ಟರು.
ಇದರ ಬೆನ್ನಲ್ಲೇ ಎಡಗೈ ವೇಗಿ ಶೊರಿಫುಲ್ ಇಸ್ಲಾಂ ಪಾತುಮ್ ನಿಸ್ಸಂಕಾ (14) ವಿಕೆಟ್ ಕಬಳಿಸಿದರು. ಆ ಬಳಿಕ ಬಂದ ಕುಸಾಲ್ ಮೆಂಡಿಸ್ (5) ಶಕೀಬ್ ಅಲ್ ಹಸನ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.
ಅಂತಿಮವಾಗಿ 92 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 62 ರನ್ ಬಾರಿಸುವ ಮೂಲಕ ಚರಿತ್ ಅಸಲಂಕಾ 39 ಓವರ್ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಶ್ರೀಲಂಕಾ ತಂಡವು 5 ವಿಕೆಟ್ಗಳ ಜಯ ಸಾಧಿಸಿ ಶುಭಾರಂಭ ಮಾಡಿದೆ.