ಹೊಸದಿಗಂತ ವರದಿ ಬಾಗಲಕೋಟೆ:
ಆಲಮಟ್ಟ ಜಲಾಶಯದಲ್ಲಿ ಗರಿಷ್ಟ ಮಟ್ಟದಲ್ಲಿ ನೀರು ಸಂಗ್ರಹಣೆಯಾದ ಪ್ರಯುಕ್ತ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಂಟಿಯಾಗಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.
ಬಾಗಿನ ಅರ್ಪಣೆ ಕಾರ್ಯಕ್ರಮದ ಹಿನ್ನಲೆ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರವನ್ನು ತಳಿರು ತೋರಣ, ಬಗೆ ಬಗೆಯ ಹೂಗಳಿಂದ ಶೃಂಗರಿಸಲಾಗಿತ್ತು. ಸೂಕ್ತ ಪೊಲೀಸ್ ಬಂದೋಬಸ್ತ್ ಸಹ ನಿಯೋಜನೆ ಮಾಡಲಾಗಿತ್ತು.
ಜಲ ಸಂಪನ್ಮೂಲ ಇಲಾಖೆ ಮತ್ತು ಕೃಷ್ಣ ಭಾಗ್ಯ ಜಲ ನಿಗಮ ನಿಯಮಿತ ವತಿಯಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ, ಜವಳಿ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಬೃಹತ ಮತ್ತು ಮದ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ,ಸಂಸದ ಪಿ.ಸಿ.ಗದ್ದಿಗೌಡರ, ರಮೇಶ ಜಿಗಜಿನ್ನಿ, ವಿ.ಪ.ಸದಸ್ಯ ಪಿ.ಎಚ್.ಪೂಜಾರ, ಹಣಮಂತ ನಿರಾಣಿ, ಜಿಲ್ಲಾಧಿಕಾರಿಗಳಾದ ಕೆ.ಎಂ ಜಾನಕಿ, ಟಿ.ಭೂಬಾಲನ ಸೇರಿದಂತೆ ಉಬಯ ಜಿಲ್ಲೆಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.