Monday, December 22, 2025

ಟಿಎಂಸಿ ಅಮಾನತುಗೊಂಡ ಶಾಸಕನಿಂದ ಹೊಸ ಪಕ್ಷ ಘೋಷಣೆ: ದೀದಿಗೆ ಶುರುವಾಯಿತೇ ಸೋಲಿನ ಭಯ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿಗೆ ಟಿಎಂಸಿಯಿಂದ ಅಮಾನತುಗೊಂಡ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೇವಲ ನಾಲ್ಕು ತಿಂಗಳು ಬಾಕಿ ಇರುವಾಗ ಹೊಸ ಪಕ್ಷ ಘೋಷಿಸಿದ್ದು, ಇದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅಲ್ಪ ಭಯ ಮೂಡಿಸಿದೆ.

ಹೀಗಾಗಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಅನ್ನು ಸಾಂಪ್ರದಾಯಿಕವಾಗಿ ಬೆಂಬಲಿಸುವ ಅಲ್ಪಸಂಖ್ಯಾತರು ಒಗ್ಗಟ್ಟಿನಿಂದ ಇರಬೇಕೆಂದು ದೀದಿ ಮನವಿ ಮಾಡಿದ್ದಾರೆ.

ಇಂದು ನಗರದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಮಟ್ಟದ ಏಜೆಂಟ್‌ಗಳ(ಬಿಎಲ್‌ಎ) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಅಲ್ಪಸಂಖ್ಯಾತರು ಭಯಭೀತರಾಗದಂತೆ ಮನವಿ ಮಾಡಿದರು ಮತ್ತು ಬಿಜೆಪಿ ವಿರುದ್ಧ ನಿರ್ಧಾರ ತೆಗೆದುಕೊಂಡು ಎಲ್ಲರೂ ಒಗ್ಗಟ್ಟಾಗಬೇಕು ಎಂದು ಮನವಿ ಮಾಡಿದರು.

ಭರತ್‌ಪುರದ ತೃಣಮೂಲ ಕಾಂಗ್ರೆಸ್ ಶಾಸಕ ಹುಮಾಯೂನ್ ಕಬೀರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಇತ್ತೀಚೆಗೆ ಪಕ್ಷದಿಂದ ಅಮಾನತುಗೊಳಿಸಿದೆ. ಇದರಲ್ಲಿ ಕೋಮು ಹೇಳಿಕೆ ಮತ್ತು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ ಮಾದರಿಯಲ್ಲಿ ಮಸೀದಿಯ ನಿರ್ಮಾಣವೂೂ ಸೇರಿದೆ.ಈ ಮಧ್ಯೆ ಕಬೀರ್ ಅವರು ಇಂದು ತಮ್ಮ ಹೊಸ ಪಕ್ಷ ಜನತಾರ್ ಉನ್ಯನ್ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

error: Content is protected !!