ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ (Maharashtra) ಜಾಲನಾದಲ್ಲಿ (Jalna) ನಡೆದ ಮರಾಠ ಮೀಸಲಾತಿಗಾಗಿ (Maratha Quota ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ವೇಳೆ ಪೊಲೀಸರು ಸೇರಿದಂತೆ ಹಲವರಿಗೆ ಗಾಯಗಳಾಗಿವೆ.
ಮಂಗಳವಾರದಿಂದ ಮರಾಠ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹೋರಾಟಗಾರ ಮನೋಜ್ ಜಾರಂಗೆ ನೇತೃತ್ವದಲ್ಲಿ ಜಾಲನದ ಅಂತರವಾಲಿ ಸಾರಥಿ ಗ್ರಾಮದಲ್ಲಿ ಉಪವಾಸ ಸತ್ಯಾಗ್ರಹ ನಡೆಯುತ್ತಿತ್ತು. ವೈದ್ಯರ ಸಲಹೆ ಮೇರೆಗೆ ಜಾರಂಜ್ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲು ಪೊಲೀಸರು ಪ್ರಯತ್ನಿಸಿದಾಗ ಘರ್ಷಣೆ ಪ್ರಾರಂಭವಾಯಿತು.
ಪ್ರತಿಭಟನಾಕಾರರು ಕಲ್ಲು ತೂರಾಟ ಆರಂಭಿಸಿದ್ದು, ಹಲವು ಪೊಲೀಸರಿಗೆ ಗಾಯಗಳಾಗಿವೆ. ಕೆಲವರು ರಾಜ್ಯ ಸಾರಿಗೆ ಬಸ್‌ಗಳು ಮತ್ತು ಖಾಸಗಿ ವಾಹನಗಳನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಿಂಸಾಚಾರದಲ್ಲಿ ಭಾಗಿಯಾದ ಆರೋಪದ ಮೇಲೆ ಪೊಲೀಸರು 300 ಕ್ಕೂ ಹೆಚ್ಚು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಶಾಂತಿಗಾಗಿ ಮನವಿ ಮಾಡಿದ್ದು ಹಿಂಸಾಚಾರದ ಉನ್ನತ ಮಟ್ಟದ ತನಿಖೆಗಾಗಿ ಸಮಿತಿಯನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ.
ಮರಾಠಾ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಯಾರೂ ಹಿಂಸಾಚಾರಕ್ಕೆ ಮುಂದಾಗಬಾರದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.