ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ರಾಜ್ಯಾದ್ಯಂತ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ನಡೆಯಲಿದೆ. ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆ ನಡೆಸುವ ಸಲುವಾಗಿ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
ಮೊದಲ ಅಧಿವೇಶನ ಬೆಳಿಗ್ಗೆ 9.30 ರಿಂದ 12.00 ಗಂಟೆಯವರೆಗೆ ಹಾಗೂ ಎರಡನೇ ಅಧಿವೇಶನ ಮಧ್ಯಾಹ್ನ 2.00 ರಿಂದ 4.30ರ ವರೆಗೆ ನಡೆಯಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚಿಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಮಾಡಲಾಗಿದೆ.
ಅಭ್ಯರ್ಥಿಗಳು ತಪ್ಪದೇ ಪಾಲಿಸಬೇಕಾದ ನಿಯಮಗಳು
- ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು, ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
- ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿರುವುದಿಲ್ಲ.
- ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್ಗಳು, ಲಾಗ್ ಟೇಬಲ್ಗಳು, ವೈಟ್ಫ್ಲೂಯಿಡ್ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.