ಹೊಸದಿಗಂತ ವರದಿ, ವಿಜಯಪುರ:
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಿಲಾಸಬಾಬು ಆಲಮೇಲಕರ (64) ಭಾನುವಾರ ಬೆಳಗಿನ ಜಾವ 3 ಗಂಟೆಗೆ ನಿಧನರಾದರು.
ಜಿಲ್ಲೆಯ ಈ ಹಿಂದಿನ ಬಳ್ಳೊಳ್ಳಿ ವಿಧಾನಸಭಾ ಮತಕ್ಷೇತ್ರದ ಶಾಸಕರಾಗಿದ್ದ ವಿಲಾಸಬಾಬು ಆಲಮೇಲಕರ ಅನಾರೋಗ್ಯಕ್ಕೀಡಾಗಿದ್ದರಿಂದ ಆಸ್ಪತ್ತೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಹು ಅಂಗಾಂಗ ವೈಫಲ್ಯದಿಂದ ಅಸುನೀಗಿದ್ದಾರೆ.
ಮೃತರು ಪತ್ನಿ, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಜಿ ಶಾಸಕರ ನಿಧನಕ್ಕೆ ಸ್ಥಳೀಯ ಜನಪ್ರತಿನಿಧಿಗಳು, ಗಣ್ಯರು, ಮಠಾಧೀಶರು ಸಂತಾಪ ಸೂಚಿಸಿದ್ದಾರೆ.