ಒಂದು ರಾಷ್ಟ್ರ ಒಂದು ಚುನಾವಣೆ ಭಾರತದ ಒಕ್ಕೂಟ ವ್ಯವಸ್ಥೆ ಮೇಲೆ ದಾಳಿ: ರಾಹುಲ್ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಒಂದು ರಾಷ್ಟ್ರ ಒಂದು ಚುನಾವಣೆಯ ಕಲ್ಪನೆಯು ಒಕ್ಕೂಟ ಮತ್ತು ಅದರ ಎಲ್ಲಾ ರಾಜ್ಯಗಳ ಮೇಲಿನ ದಾಳಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಹೇಳಿದ್ದಾರೆ.

ಏಕ ಚುನಾವಣೆ ನಡೆಸುವ ಸಾಧ್ಯತೆ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸರ್ಕಾರ ರಚಿಸಿದ ನಂತರ ಟ್ವೀಟ್ ಮಾಡಿದ್ದು, ಒಂದು ದೇಶ, ಒಂದು ಚುನಾವಣೆಯ ಉದ್ದೇಶ ದೇಶದ ಒಕ್ಕೂಟ ವ್ಯವಸ್ಥೆ ಮತ್ತು ರಾಜ್ಯಗಳ ಮೇಲೆ ದಾಳಿ ನಡೆಸುವುದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ವಿರೋಧಪಕ್ಷಗಳ ಮೈತ್ರಿಕೂಟ ಇಂಡಿಯಾ ಉಲ್ಲೇಖಿಸಿರುವ ರಾಹುಲ್, ‘ಇಂಡಿಯಾ ಅಂದರೆ ಭಾರತ, ಅದುವೇ ರಾಜ್ಯಗಳ ಒಕ್ಕೂಟ’ ಎಂದು ಹೇಳಿದ್ದಾರೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪರಿಗಣಿಸದಿದ್ದರಿಂದ ಸಮಿತಿಯ ಸದಸ್ಯರಾಗಲು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ನಿರಾಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!