ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್‌ನ ನಾಲ್ಕನೇ ಸೀಸನ್‌ಗೆ ಮೊದಲು, ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ತನ್ನ ತಂಡದ ನಾಯಕಿಯನ್ನು ಬದಲಾಯಿಸಲು ನಿರ್ಧರಿಸಿದೆ.
ಕಳೆದ ಎರಡು ವರ್ಷಗಳಿಂದ ಮೆಗ್ ಲ್ಯಾನಿಂಗ್ ತಂಡದ ನಾಯಕಿಯಾಗಿದ್ದರು. ಆದರೆ ಈಗ ಈ ಜವಾಬ್ದಾರಿಯನ್ನು ಟೀಂ ಇಂಡಿಯಾದ ಸ್ಟಾರ್ ಆಟಗಾರ್ತಿ ಜೆಮಿಮಾ ರೊಡ್ರಿಗಸ್‌ಗೆ ನೀಡಲಾಗುತ್ತಿದೆ.
ಡಿಸೆಂಬರ್ 23 ರಂದು ಈ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿದೆ ಎಂದು ವರದಿಯಾಗಿದೆ. 2 ಆವೃತ್ತಿಗಳಲ್ಲಿ ತಂಡವನ್ನು ಫೈನಲ್ಗೆ ಮುನ್ನಡೆಸಿದ್ದ ಮಾಜಿ ನಾಯಕಿ ಮೆಗ್ ಲ್ಯಾನಿಂಗ್ ಅವರನ್ನು ಹರಾಜಿಗೂ ಮುನ್ನ ತಂಡದಿಂದ ಬಿಡುಗಡೆ ಮಾಡಲಾಯಿತು. ಇದಾದ ಬಳಿಕವೇ ಉಪನಾಯಕಿ ಜೆಮಿಮಾ ಅವರನ್ನು ನಾಯಕಿಯಾಗಿ ನೇಮಿಸಲು ಮುಂದಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಭಾರತವನ್ನು ವಿಶ್ವಕಪ್ ಗೆಲುವಿನತ್ತ ಮುನ್ನಡೆಸಿದ್ದ ಜೆಮಿಮಾಗೆ ಡೆಲ್ಲಿ ತಂಡದ ನಾಯಕತ್ವ ಸಿಗಲಿದೆ. ಕಳೆದ ತಿಂಗಳು ದೆಹಲಿಯಲ್ಲಿ ನಡೆದ WPL 2026 ಆಟಗಾರರ ಹರಾಜಿನ ಸಂದರ್ಭದಲ್ಲಿ, DC ಸಹ-ಮಾಲೀಕ ಪಾರ್ಥ್ ಜಿಂದಾಲ್ ಅವರು ರೊಡ್ರಿಗಸ್‌ಗೆ ನಾಯಕತ್ವವನ್ನು ಹಸ್ತಾಂತರಿಸುವ ಬಗ್ಗೆ ಸುಳಿವು ನೀಡಿದ್ದರು.
ಟೀಂ ಇಂಡಿಯಾ ಸ್ಟಾರ್ ಜೆಮಿಮಾ ರೊಡ್ರಿಗಸ್ ಈಗ ಕ್ಯಾಪ್ಟನ್!

