ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೃದಯಾಘಾತದಿಂದ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ದುರಂತ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.
ಮೃತರನ್ನು ಪೊಲೀಸ್ ಸಿಬ್ಬಂದಿ ರಾಘವೇಂದ್ರ ಎಂದು ಗುರುತಿಸಲಾಗಿದೆ. ನಿನ್ನೆ ತಡರಾತ್ರಿ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ.
ಇತ್ತೀಚೆಗಷ್ಟೇ ಬಳ್ಳಾರಿ ಲೋಕಾಯುಕ್ತ ಕಚೇರಿಯಿಂದ ಕಮಲಾಪುರ ಠಾಣೆಗೆ ವರ್ಗಾವಣೆ ಆಗಿದ್ದ ಅವರು ಹೆಡ್ ಕಾನ್ಸ್ಟೆಬಲ್ ಆಗಿ ಬಡ್ತಿ ಪಡೆದಿದ್ದರು. ಅಲ್ಲದೆ ಅವರು 18 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಮೃತ ಪೊಲೀಸ್ ಸಿಬ್ಬಂದಿ ರಾಘವೇಂದ್ರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ವಿಜಯನಗರದ ಪೊಲೀಸ್ ಇಲಾಖೆಯ ಅಧಿಕಾರಿಗಳು ಅವರ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ.