ಬೀದರ್ ನಲ್ಲಿ ಲಘು ಭೂಕಂಪ: 2.6 ತೀವ್ರತೆ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬೀದರ್ ನಲ್ಲಿ ಭೂಮಿ ಕಂಪಿಸಿದ್ದು, ಕಂಪನದ ತೀವ್ರತೆ ರಿಕ್ಟರ್ ಮಾಪಕದಲ್ಲಿ 2.6 ದಾಖಲಾಗಿದೆ.

ಜಿಲ್ಲೆಯ ಭಾಲ್ಕಿ ತಾಲೂಕಿನ ಡಾಕುಳಗಿ ಗ್ರಾಮ ಸೇರಿದಂತೆ ಕೆಲವೆಡೆ ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ನಡುಗಿದ ಅನುಭವವಾಗಿದೆ. ಕೂಡಲೇ ಜನರು ಭಯದಿಂದ ಮನೆಯಿಂದ ಹೊರನಡೆದಿದ್ದಾರೆ.

ಇದೊಂದು ಲಘು ಭೂಕಂಪನವಾಗಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!