Tuesday, December 23, 2025

WEATHER | ರಾಜ್ಯದಲ್ಲಿ ಭಾರೀ ಚಳಿ, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಳೆದ ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಶೀತದಲೆ ಅಬ್ಬರಿಸುತ್ತಿದ್ದು, ಬೆಂಗಳೂರಿನಲ್ಲಿ ತೀವ್ರ ಚಳಿಯಿಂದ ಸಾರ್ವಜನಿಕರು ತತ್ತರಿಸಿಹೋಗಿದ್ದಾರೆ. ಉತ್ತರ ಕರ್ನಾಟಕದಲ್ಲೂ ಶೀತದಲೆಯ ಎಫೆಕ್ಟ್ ಜೋರಾಗಿದ್ದು, ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಉತ್ತರ ಕರ್ನಾಟಕದಲ್ಲಿಂದು ಚಳಿಯ ಪ್ರಮಾಣ ಕಡಿಮೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಭಾನುವಾರ (ಡಿ.21) ವಿಜಯಪುರದಲ್ಲಿ 6.9 ಡಿಗ್ರಿ ಸೆಲ್ಸಿಯಲ್ಸ್ ಉಷ್ಣಾಂಶ ದಾಖಲಾಗಿತ್ತು.ಕಳೆದ 20 ವರ್ಷಗಳ ಅಂಕಿ ಅಂಶಗಳ ಪ್ರಕಾರ ಮೂರನೇ ಬಾರಿಗೆ ದಾಖಲಾದ ಅತಿ ಕಡಿಮೆ ಉಷ್ಣಾಂಶ ಇದಾಗಿದೆ. ಆದರೆ ಇಂದು ಉತ್ತರ ಕರ್ನಾಟಕದಲ್ಲಿನ ತಾಪಮಾನದಲ್ಲಿ ಸುಧಾರಣೆ ಕಂಡಿದೆ. ನಿನ್ನೆ 5 ಕಡೆ ಯೆಲ್ಲೋ ಅಲರ್ಟ್​ ಇದ್ದರೆ, ಇಂದು ಕಲಬುರಗಿ ಮತ್ತು ಬೀದರ್​ನಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣದಲ್ಲಿ ಸಾಕಷ್ಟು ಏರು ಪೇರಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಇಂದು ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ.

error: Content is protected !!