ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾದೇಶದಲ್ಲಿನ ಆಂತರಿಕ ಹಿಂಸಾಚಾರ ತೀವ್ರಗೊಂಡು ಅಲ್ಲಿನ ಅಲ್ಪ ಸಂಖ್ಯಾತ ಹಿಂದುಗಳ ಮೇಲಿನ ದಾಳಿ ಖಂಡಿಸಿ ದೆಹಲಿಯಲ್ಲಿ ಹಿಂದೂಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ.
ಬಾಂಗ್ಲಾದೇಶದಲ್ಲಿ ಹಿಂದು ಯುವಕನ ಬರ್ಬರ ಹತ್ಯೆ ಖಂಡಿಸಿ ದೆಹಲಿಯ ಬಾಂಗ್ಲಾದೇಶ ರಾಯಭಾರ ಕಚೇರಿ ಎದುರು ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ವಿರೋಧಿಸಿ ಕಳೆದ ಕೆಲ ದಿನಗಳಿಂದ ದೆಹಲಿ ಮತ್ತು ತ್ರಿಪುರಾ ರಾಯಭಾರ ಕೆಚೇರಿಗಳ ಮುಂದೆ ಪ್ರತಿಭಟನೆಗಳು ನಡೆಯುತ್ತಿದ್ದು, ಇದೀಗ ಪ್ರತಿಭಟನೆ ತೀವ್ರಗೊಂಡು ಪೊಲೀಸರ ಲಾಠಿ ಪ್ರಹಾರ ಕೂಡ ನಡೆದಿದೆ.
ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸೇರಿದ ನೂರಾರು ಕಾರ್ಯಕರ್ತರು ಮಂಗಳವಾರ ಬಾಂಗ್ಲಾದೇಶ ಹೈಕಮಿಷನ್ ಹೊರಗೆ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಯತ್ನಿಸಿದಾಗ ಹೆಚ್ಚಿನ ಭದ್ರತಾ ರಾಜತಾಂತ್ರಿಕ ವಲಯದಲ್ಲಿ ಅಡಚಣೆ ಉಂಟಾಯಿತು.

