ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗಾಗಿ ಜಾರಿ ಮಾಡಿದ್ದ ʻಕ್ಷೀರಭಾಗ್ಯʼ ಯೋಜನೆಗೆ ದಶಕದ ಸಂಭ್ರಮ. ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಾರಿ ಮಾಡಿದ್ದ ಈ ಯೋಜನೆಗೆ ಹತ್ತು ವರ್ಷ ಕಳೆದಿವೆ. ಈ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಮಧುಗಿರಿಯಲ್ಲಿ ಬೃಹತ್ ಸಮಾವೇಶವನ್ನು ಏರ್ಪಡಿಸಿದ್ದು, ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.
ಈಗಾಗಲೇ ಮಧುಗಿರಿ ಪಟ್ಟಣದಲ್ಲಿ ಕಾರ್ಯಕ್ರಮಕ್ಕಾಗಿ ವೇದಿಕೆ ಸಿದ್ದವಾಗಿದೆ. ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್, ಸಹಕಾರ ಸಚಿವ ಕೆ. ಎನ್. ರಾಜಣ್ಣ ಸಮಾರಂಭದ ಮೇಲುಸ್ತುವಾರಿ ವಹಿಸಿದರು. ಇನ್ನೂ ಈ ಕಾರ್ಯಕ್ರಮಕ್ಕೆ ಒಂದು ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆಯಿದೆ.
2013ರಲ್ಲಿ ಈ ಯೋಜನೆ ಜಾರಿಯಾಗಿ ಇಂದಿಗೆ ಹತ್ತು ವರ್ಷ ಕಳೆದಿದೆ. ಆಗಲೂ ಇದೇ ಕಾಂಗ್ರೆಸ್ ಸರ್ಕಾರ ಅಧಿಕಾರಲ್ಲಿದ್ದು, ಸಿದ್ದರಾಮಯ್ಯ ಸಿಎಂ ಆಗಿದ್ದರು. ಅವರ ಕೈಯಿಂದಲೇ ಜಾರಿಯಾದ ಈ ಯೋಜನೆ ಬಗ್ಗೆ ಇಂದು ಸಿದ್ದರಾಮಯ್ಯ ಮಾತನಾಡಲಿದ್ದಾರೆ.