ಹೊಸ ದಿಗಂತ ಡಿಜಿಟಲ್ ಡೆಸ್ಕ್:
ದೋಣಿ ಮುಳುಗಿ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ದರ್ಭಾಂಗಾನಲ್ಲಿ ನಡೆದಿದೆ. ಕಮಲಾ ನದಿಯಲ್ಲಿ ದೋಣಿ ಮಗುಚಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ.
ಮಾಹಿತಿ ಪಡೆದು ಸ್ಥಳೀಯರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸರ್ಕಾರ ನೆರವು ನೀಡಬೇಕೆಂದು ಆಗ್ರಹಿಸಿದ್ದಾರೆ.