ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಮೃತ ವಿದ್ಯಾರ್ಥಿನಿಯನ್ನು ತರೀಕೆರೆ ತಾಲೂಕಿನ ಸೀತಾಪುರ ಕಾವಲು ನಿವಾಸಿ ತುಳಸಿ(15) ಎನ್ನಲಾಗಿದೆ.
ತರೀಕೆರೆ ತಾಲೂಕಿನ ಸೀತಾಪುರ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ಇಂದು ಬೆಳಗ್ಗೆ ಬಸ್‌ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಅದರ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತುಳಸಿ ಸಾವನ್ನಪ್ಪಿದ್ದಾಳೆ ಮತ್ತು ಇನ್ನೋರ್ವ ವಿದ್ಯಾರ್ಥಿನಿ ನಿವೇದಿತಾಗೆ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.