ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಗೃಹಲಕ್ಷ್ಮೀ ಯೋಜನೆ ನೋಂದಣಿ ಸ್ಥಗಿತಗೊಂಡಿಲ್ಲ, ಗೊಂದಲ ಬೇಡ ಅಂಥ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು , ಟ್ವಿಟರ್‌ನಲ್ಲಿ ಗೃಹಲಕ್ಷ್ಮೀ ಯೋಜನೆ ನೋಂದಣಿ ಸ್ಥಗಿತಗೊಂಡ ಹೇಳಿಕೆಗೆ ಸಂಬಂಧಪಟ್ಟಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಅದು ನಿರಂತರ ಪ್ರಕ್ರಿಯೆ, ನೋಂದಣಿ ಸ್ಥಗಿತಗೊಂಡಿಲ್ಲ. ಈ ರೀತಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು. ಸುಳ್ಳು ಪ್ರಚಾರ ಮಾಡಿದವರಿಗೆ ನೋಟಿಸ್ ಜಾರಿ ಮಾಡಲಾಗುವುದು. ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತೇವೆ. ಇಲಾಖೆ ವೆಬ್‌ಸೈಟ್‌ನಲ್ಲಿ ಮಾಡಿರುವ ಪ್ರಕಟಣೆ ಬಗ್ಗೆ ನನಗೆ ಗೊತ್ತಾಗಿಲ್ಲ. ಈ ಬಗ್ಗೆ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರ ಜೊತೆ ಚರ್ಚೆ ನಡೆಸಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಹೇಳಿದರು.