Tuesday, December 23, 2025

ಬೆಂಗಳೂರಿನಲ್ಲಿ ನಾಲ್ಕು ದಿನ ಪವರ್ ಕಟ್: ಇಂದು 80ಕ್ಕೂ ಹೆಚ್ಚು ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಗರದಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಲಿಮಿಟೆಡ್ (ಕೆಪಿಟಿಸಿಎಲ್) ಮಹತ್ವದ ನಿರ್ವಹಣಾ ಮತ್ತು ದುರಸ್ತಿ ಕಾರ್ಯಗಳನ್ನು ಕೈಗೊಂಡಿದೆ.

ಇಂದು ಬೆಂಗಳೂರಿನ ದಕ್ಷಿಣ, ಪಶ್ಚಿಮ ಹಾಗೂ ಉತ್ತರ ವಲಯಗಳ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಉಂಟಾಗಲಿದೆ. ಜೊತೆಗೆ ಡಿಸೆಂಬರ್ 25ರಿಂದ 28ರವರೆಗೆ ನಾಲ್ಕು ದಿನಗಳ ಕಾಲ ಪ್ರತಿದಿನ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ ಎಂದು ಕೆಪಿಟಿಸಿಎಲ್ ಮಾಹಿತಿ ನೀಡಿದೆ.

ಸರ್ಜಾಪುರ–ಅತ್ತಿಬೆಲೆ ನಡುವಿನ 66 ಕೆವಿ ಪ್ರಸರಣ ಮಾರ್ಗವನ್ನು ಆಧುನಿಕ ಹೈ-ಟೆಂಪರೇಚರ್ ಲೋ-ಸಾಗ್ ಕಂಡಕ್ಟರ್‌ಗಳಿಂದ ಬದಲಾಯಿಸುವ ಕಾಮಗಾರಿ ನಡೆಯುತ್ತಿದೆ. ಇದಕ್ಕೆ ಜೊತೆಯಾಗಿ ಸರ್ಜಾಪುರದ 220/66/11 ಕೆವಿ ಸಬ್‌ಸ್ಟೇಷನ್‌ನಲ್ಲಿ ಎರಡನೇ ಸರ್ಕ್ಯೂಟ್ ಸಂಪರ್ಕ ಕಲ್ಪಿಸುವ ಕಾರ್ಯವೂ ನಡೆಯುತ್ತಿರುವುದರಿಂದ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಿದೆ.

ಇಂದು ಅತ್ತಿಬೆಲೆ ವಲಯದ ಯಡ್ವನಹಳ್ಳಿ, ಅತ್ತಿಬೆಲೆ ಟೌನ್, ಕೈಗಾರಿಕಾ ಪ್ರದೇಶಗಳು ಸೇರಿದಂತೆ ಹಲವು ಭಾಗಗಳಲ್ಲಿ ವಿದ್ಯುತ್ ಇರುವುದಿಲ್ಲ. ಇದೇ ರೀತಿ ಆನೇಕಲ್ ವಲಯದ ಆನೇಕಲ್ ಟೌನ್, ಹೊಂಪಲಗಟ್ಟಾ, ಕಾವಲುಹೊಸಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೂ ಪವರ್ ಕಟ್ ಅನಿವಾರ್ಯವಾಗಿದೆ. ಸಾರ್ವಜನಿಕರು ಅಗತ್ಯ ಮುಂಜಾಗ್ರತೆ ವಹಿಸಿ ಸಹಕರಿಸುವಂತೆ ಕೆಪಿಟಿಸಿಎಲ್ ಮನವಿ ಮಾಡಿದೆ.

error: Content is protected !!