ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services) ಇಲಾಖೆಯಲ್ಲಿ ಖಾಲಿ ಇರುವ 78 ಜ್ಯೂನಿಯರ್ ಡಿಸೈನ್ ಇಂಜಿನಿಯರ್ ಮತ್ತು ಸಿಎಡಿ ಡ್ರಾಫ್ಟ್ಮನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಡಿಪ್ಲೋಮಾ, ಐಟಿಐ, ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಜೊತೆಗೆ ಸೆಪ್ಟೆಂಬರ್ 1,2023ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ ಆಧಾರದ ಮೇಲೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 1,20,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅನ್ಲೈನ್ ಮೂಲಕ ಸೆಪ್ಟೆಂಬರ್ 10,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.