BIG NEWS | ಬಿಜೆಪಿ-ಜೆಡಿಎಸ್ ಮೈತ್ರಿಗೆ ಅಮಿತ್ ಶಾ ಅಸ್ತು, ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ತೆನೆ ಸ್ಪರ್ಧೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜೆಡಿಎಸ್-ಬಿಜೆಪಿ ಮೈತ್ರಿಗೆ ಗೃಹ ಸಚಿವ ಅಮಿತ್ ಶಾ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ. ಅಮಿತ್ ಶಾ ಅವರು ನಾಲ್ಕು ಸ್ಥಾನಗಳನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಒಪ್ಪಿದ್ದಾರೆ. ಎರಡೂ ಪಕ್ಷಗಳ ಮೈತ್ರಿಯಿಂದ ಬಿಜೆಪಿಗೆ ಇನ್ನಷ್ಟು ಶಕ್ತಿ ಬರಲಿದೆ. ಮೈತ್ರಿ ಬಗ್ಗೆ ವರಿಷ್ಠರು ಸೂಚನೆ ನೀಡಿದ್ದಾಗಿದೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.

ಕಾಂಗ್ರೆಸ್ ವಿರುದ್ಧ ಹೋರಾಡಲು ವಿಪಕ್ಷಗಳ ಮೈತ್ರಿ ಬಹಳ ಮುಖ್ಯ ನಾವು ಒಗ್ಗಟ್ಟಾಗಿ ಕಾಂಗ್ರೆಸ್ ವಿರುದ್ಧ ಹೋರಾಡುತ್ತೇವೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!