ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿ-20 ಶೃಂಗಸಭೆಗಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮೊದಲ ಬಾರಿಗೆ ಭಾರತಕ್ಕೆ ಆಗಮಿಸಿದ್ದಾರೆ.
ಅಮೆರಿಕದಿಂದ ಅಲ್ಲಿನ ಕಾಲಮಾನ ಪ್ರಕಾರ ಗುರುವಾರ ರಾತ್ರಿ ಬೈಡನ್ ಪ್ರಯಣ ಆರಂಭಿಸಿದ್ದರು. ಇಂದು ಸಂಜೆ 7 ಗಂಟೆ ಭಾರತಕ್ಕೆ ತಲುಪಿದ್ದಾರೆ.
2021ರ ಜನವರಿಯಲ್ಲಿ ಅಮೆರಿಕ ಅಧ್ಯಕರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬೈಡನ್ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ.
ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಬೈಡನ್ ಅವರನ್ನು ಕೇಂದ್ರ ಸಚಿವ ವಿಕೆ ಸಿಂಗ್ ಅವರು ಬರಮಾಡಿಕೊಂಡರು.