ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಚೀನಾದ ವಿವಾದಿತ ಮ್ಯಾಪ್ ಕುರಿತು ಪ್ರಧಾನಿ ಮೋದಿ ಪರೋಕ್ಷವಾಗಿ ವಾಗ್ಜಾಳಿ ನಡೆಸಿದ್ದಾರೆ .
‘ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಖಚಿತಪಡಿಸುವುದು ಪ್ರತಿಯೊಬ್ಬರ ಕರ್ತವ್ಯ ಎನ್ನುವ ಮೂಲಕ ಚೀನಾಕ್ಕೆ ಖಡಕ್ ಸಂದೇಶ ರವಾನಿಸಿದ್ದಾರೆ.
ಭಾರತದ ಅವಿಭಾಜ್ಯ ಪ್ರದೇಶಗಳಾದ ಅರುಣಾಚಲ ಪ್ರದೇಶ ಮತ್ತು ಅಕ್ಸಾಯ್ ಚಿನ್ ಅನ್ನು ತಮ್ಮ ಇತ್ತೀಚಿನ ಆವೃತ್ತಿಯ ನಕ್ಷೆಯಲ್ಲಿ ಸೇರಿಸುವ ಮೂಲಕ ಮೂಗು ತೂರಿಸಿದ್ದ ಚೀನಾ ನಡೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಈ ಸಂದೇಶ ರವಾನಿಸಿದ್ದಾರೆ.
ಸಾರ್ವಭೌಮತ್ವ ಪ್ರಾದೇಶಿಕ ಸಮಗ್ರತೆಗೆ ಧಕ್ಕೆ ಬಂದರೆ ಸಹಿಸಲು ಸಾಧ್ಯವಿಲ್ಲ. ಅಂತಾರಾಷ್ಟ್ರೀಯ ಕಾನೂನುಗಳನ್ನು ಸಂಪೂರ್ಣವಾಗಿ ಅನುಸರಿಸುವ ನಿರ್ಣಾಯಕ ಪ್ರಾಮುಖ್ಯತೆ ಇದೆ. ಅಂತಾರಾಷ್ಟ್ರೀಯ ಕಾನೂನುಗಳಿಗೆ ಸಂಪೂರ್ಣವಾಗಿ ಬದ್ಧವಾಗಿರುವುದು ಅತ್ಯಗತ್ಯ ಮತ್ತು ಎಲ್ಲಾ ದೇಶಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಬಲಪಡಿಸಲು ಪ್ರತಿಯೊಬ್ಬರ ಬದ್ಧತೆ ಮತ್ತು ಪ್ರಯತ್ನಗಳು ಅಗತ್ಯ ಎಂದು ಹೇಳಿದರು.
ಪ್ರಸ್ತುತ ಜಾಗತಿಕ ಭೂದೃಶ್ಯವು ಅನಿಶ್ಚಿತತೆಯಿಂದ ಸುತ್ತುವರಿದಿದೆ. ಭಯೋತ್ಪಾದನೆ, ಉಗ್ರವಾದ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷಗಳು ದೊಡ್ಡ ಸವಾಲುಗಳಾಗಿವೆ. ಈ ಸವಾಲುಗಳನ್ನು ಎದುರಿಸುವಲ್ಲಿ ಬಹುಪಕ್ಷೀಯತೆ ಮತ್ತು ನಿಯಮಾಧಾರಿತ ಅಂತಾರಾಷ್ಟ್ರೀಯ ಕ್ರಮದ ಮಹತ್ವವನ್ನು ಅವರು ಒತ್ತಿ ಹೇಳಿದರು.
ಭಯೋತ್ಪಾದನೆಗೆ ಹಣಕಾಸು ನೆರವು ಮತ್ತು ಸೈಬರ್-ತಪ್ಪು ಮಾಹಿತಿಯ ಕುರಿತು ಅವರು ೧೨ ಅಂಶಗಳ ಪ್ರಸ್ತಾವನೆ ಪಟ್ಟಿ ಮಾಡಿದ ಅವರು ಜಾಗತಿಕ ನಿಯಮಗಳಿಗೆ ಸಂಪೂರ್ಣವಾಗಿ ಅಂಟಿಕೊಳ್ಳುವುದು ಬಹಳ ಮುಖ್ಯ, ಮತ್ತು ಎಲ್ಲಾ ರಾಷ್ಟ್ರಗಳ ಸ್ವಾತಂತ್ರ್ಯ ಮತ್ತು ಪ್ರಾದೇಶಿಕ ಸಮಗ್ರತೆ ಕಾಪಾಡಿಕೊಳ್ಳಲು ಪ್ರತಿಯೊಬ್ಬರ ಜವಾಬ್ದಾರಿ. ಇದಕ್ಕಾಗಿ ಜಂಟಿ ಕ್ರಮಗಳು ಸಹ ಅಗತ್ಯವಿದೆ ಎಂದು ಹೇಳಿದ್ದಾರೆ.