ಜ್ಞಾನವಾಪಿ ಮಸೀದಿ ಸಮೀಕ್ಷೆಗೆ 8 ವಾರಗಳ ಹೆಚ್ಚುವರಿ ಕಾಲಾವಕಾಶ ನೀಡಿದ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಿ ವರದಿ ನೀಡಲು ವಾರಾಣಸಿ ನ್ಯಾಯಾಲಯವು  ಎಂಟು ವಾರಗಳ ಹೆಚ್ಚುವರಿ ಸಮಯ ನೀಡಿದೆ.

ಮಸೀದಿ ಆಡಳಿತ ಮಂಡಳಿಯ ಆಕ್ಷೇಪವನ್ನು ತಳ್ಳಿಹಾಕಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ಎಎಸ್‌ಐಗೆ ಹೆಚ್ಚುವರಿ ಸಮಯ ನೀಡಿದ್ದಾರೆ.

ವಾರಾಣಸಿಯ ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದಲ್ಲಿ ಎಎಸ್‌ಐ ವೈಜ್ಞಾನಿಕ ಸಮೀಕ್ಷೆ ನಡೆಸುತ್ತಿದೆ. ವೈಜ್ಞಾನಿಕ ಸಮೀಕ್ಷೆಯಿಂದ ಎರಡೂ ಕಡೆಯವರಿಗೂ ಅನುಕೂಲವಾಗಲಿದೆ ಎಂದು ಅಲಹಾಬಾದ್‌ ಹೈಕೋರ್ಟ್‌ ಈ ಹಿಂದೆ ಅಭಿಪ್ರಾಯಪಟ್ಟಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!