ಬಾಲಿವುಡ್ ನಟಿ ಕಂಗನಾ ರಣಾವತ್ ಬಹುನಿರೀಕ್ಷಿತ ಸಿನಿಮಾ ‘ಚಂದ್ರಮುಖಿ 2’ ರಿಲೀಸ್ ಗೆ ಡೇಟ್ ಫಿಕ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಮಿಳು ಖ್ಯಾತ ನಿರ್ದೇಶಕ, ನಟ ರಾಘವ ಲಾರೆನ್ಸ್ (Raghava Laurence) ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ (Kangana Ranaut) ನಟನೆಯ ಬಹುನಿರೀಕ್ಷಿತ ಸಿನಿಮಾ ‘ಚಂದ್ರಮುಖಿ 2’ (Chandramukhi 2) ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ

ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟೆಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ‘ಚಂದ್ರಮುಖಿ 2’ ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ.

ಚಂದ್ರಮುಖಿ-2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ಅವರು ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ನಟಿಸಿದ್ದಾರೆ. 2005ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್ ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲಿಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!