ಜೆಡಿಎಸ್​ ಜೊತೆ ಮೈತ್ರಿ ಕುರಿತು ಬಿಎಸ್​ ಯಡಿಯೂರಪ್ಪ ಹೇಳಿದ್ದೇನು?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜೆಡಿಎಸ್​ ಜೊತೆ (JDS BJP alliance ) ಮೈತ್ರಿ ಆಗುತ್ತೆ ಎಂದು ಹೇಳಿದ್ದ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ (BS Yediyurappa) ಇದೀಗ ಏಕಾಏಕಿ ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ ಎಂದು ಯುಟರ್ನ್​ ಹೊಡೆದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್​ವೈ, ಪ್ರಧಾನಿ ನರೇಂದ್ರ ಮೋದಿ ಬೇರೆ ವಿಷಯದಲ್ಲಿ ಬ್ಯುಸಿಯಾಗಿದ್ದಾರೆ. ಬಹುಶ ನಾಳೆ ಅಥವಾ ನಾಡಿದ್ದು ನಂತರ ಮಾತುಕತೆ ಆಗಬಹುದು. ಇದುವರೆಗೆ ಯಾವುದೇ ಮಾತುಕತೆ ಆಗಿಲ್ಲ, ಕಾದು ನೋಡುತ್ತೇವೆ.ಈ ಹಿಂದೆ ನಾನು ಹೇಳುವಾಗಲೂ ಒಂದು ರೂಪಕ್ಕೆ ಬಂದಿರಲಿಲ್ಲ. ಈಗಲೂ ಅಷ್ಟೇ ಮೈತ್ರಿ ವಿಚಾರ ಯಾವುದೇ ರೂಪಕ್ಕೆ ಬಂದಿಲ್ಲ. ಎಲ್ಲವನ್ನೂ ಪ್ರಧಾನಿ ಮೋದಿ, ಅಮಿತ್ ಶಾ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.

JDS ಬಿಜೆಪಿಯ ಬಿ ಟೀಂ ಎನ್ನುವುದು ನಿಜವಾಯ್ತು ಎನ್ನುವ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ನಾನು ಮಾತಾಡಲು ಹೋಗಲ್ಲ. ಅಮಿತ್ ಶಾ ಜೊತೆ ನಾನು ಇನ್ನೂ ಮಾತಾಡಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!