Tuesday, December 23, 2025

ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ದೆಹಲಿ ಪರ ಕಣಕ್ಕಿಳಿಯಲಿದ್ದಾರೆ ಕಿಂಗ್‌ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ವಿರಾಟ್‌ ಕೊಹ್ಲಿ ಮೊದಲ ಬಾರಿಗೆ ಬೆಂಗಳೂರಿನ ಹೊರವಲಯದಲ್ಲಿ ಬಿಸಿಸಿಐ ನಿರ್ಮಾಣ ಮಾಡಿರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ದೆಹಲಿ ಪರ ನಾಳೆ ಕಣಕ್ಕೆ ಇಳಿಯಲಿದ್ದಾರೆ.

ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ದೆಹಲಿ ಮತ್ತು ಆಂಧ್ರಪ್ರದೇಶ ನಡುವಿನ ವಿಜಯ್ ಹಜಾರೆ ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಬೆಂಗಳೂರು ಪೊಲೀಸರು ಅನುಮತಿ ನಿರಾಕರಿಸಿದ ಕಾರಣ ಪಂದ್ಯ ಕೆಂಪೇಗೌಡ ವಿಮಾನ ನಿಲ್ದಾಣದ ಸಮೀಪ ಇರುವ ಸೆಂಟರ್‌ ಆಫ್‌ ಎಕ್ಸೆಲೆನ್ಸ್‌ ಮೈದಾನದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಅನುಮತಿ ಇಲ್ಲ.

40 ಎಕರೆ ವಿಸ್ತೀರ್ಣದ ಕ್ಯಾಂಪಸ್‌ನಲ್ಲಿರುವ ಈ ಸೌಲಭ್ಯವು ಪ್ರಥಮ ದರ್ಜೆ ಕ್ರಿಕೆಟ್ ಅನ್ನು ಆಯೋಜಿಸಲು ಐಸಿಸಿಯ ನಿಯಮಗಳ ಪ್ರಕಾರ ನಿರ್ಮಿಸಲಾದ ಮೂರು ಮೈದಾನಗಳನ್ನು ಒಳಗೊಂಡಿದೆ.

error: Content is protected !!