ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಇಂದು ಹಾಗೂ ನಾಳೆ ಮಹತ್ವದ ಸಭೆಯನ್ನು ಕರೆದಿದೆ.
ಇದೀಗ ರಾಜ್ಯದಲ್ಲಿರುವ ಪ್ರಮುಖ ಸಮಸ್ಯೆಗಳಲ್ಲಿ ಬರವೂ ಒಂದಾಗಿದೆ. ಜೊತೆಗೆ ಇತರ ಅಭಿವೃದ್ಧಿ ಕುರಿತು ಸಭೆ ನಡೆಸಲಾಗುತ್ತದೆ. ಬರಗಾಲಕ್ಕೆ ಸಂಬಂಧಿಸಿದಂತೆ, ಈ ತಿಂಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಿರುವ ಬಗ್ಗೆ ಸ್ಪಷ್ಟ ಚಿತ್ರಣ ಪಡೆಯಬೇಕು. ಆದರೆ ಸ್ಪಷ್ಟ ಚಿತ್ರಣಕ್ಕಾಗಿ ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕು ಎನ್ನುವುದು ತಜ್ಞರ ಅಭಿಪ್ರಯಾಯವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಬರ ಹಾಗೂ ಅಭಿವೃದ್ಧ ವಿಷಯವಾಗಿ ಪ್ರಮುಖವಾದ ಸಭೆ ಇದಾಗಿರಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.