ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರದಲ್ಲಿ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ತಚಂದನ ಕಳ್ಳಸಾಗಣೆ ಮಾಡುತ್ತಿದ್ದ ವಾಹನ ಭೀಕರ ಅಪಘಾತಕ್ಕೀಡಾಗಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರ್ನ ಒಳಗೆ ಇರುವವರು ಬದುಕಿದ್ದಾರೆ ಎಂದು ಹೇಳುವುದೂ ಅಸಾಧ್ಯ, ಆದರೆ ರಕ್ತಚಂದನ ಸಾಗಿಸುತ್ತಿದ್ದವರಲ್ಲಿ ಯಾರೂ ಮೃತಪಟ್ಟಿಲ್ಲ. ಸಣ್ಣ ಪುಟ್ಟ ಗಾಯಗಳೊಂದಿಗೆ ಎಲ್ಲರೂ ಆರೋಗ್ಯವಾಗಿದ್ದಾರೆ.
ಹೌದು, ರಕ್ತಚಂದನ ಸಾಗಿಸುತ್ತಿದ್ದ ನಾಗರಾಜು, ನಾಗೇಂದ್ರ, ಶ್ರೀನಿವಾಸ್ ಎನ್ನುವವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಕಾರು ಯಾವುದೆಂದು ತಿಳಿಸಲಾಗದಷ್ಟು ನಜ್ಜುಗುಜ್ಜಾಗಿದೆ. ಆದರೆ ಕಾರ್ ಒಳಗಿದ್ದವರ ಪ್ರಾಣ ಉಳಿದಿದ್ದ ಹೇಗೆ ಎನ್ನುವ ಪ್ರಶ್ನೆ ಎಲ್ಲರಲ್ಲೂ ಮೂಡಿದೆ.
ಕಾರಿನ ಸೀಟ್ ಅಡಿ ೨೪ ರಕ್ತಚಂದನದ ತುಂಡುಗಳನ್ನು ಇಟ್ಟುಕೊಂಡು ಸಾಗಿಸುತ್ತಿದ್ದರು. ಪೆರೇಸಂದ್ರ ಪೊಲೀಸರು ರಕ್ತಚಂದನ ವಶಪಡಿಸಿಕೊಂಡಿದ್ದು, ವಿಚಾರಣೆ ನಡೆಯಲಿದೆ.