ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಇಂದಿನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಪ್ರಾರಂಭವಾಗಲಿದೆ.
5 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಟರ್ಮಿನಲ್ 2, ವಿದೇಶಿ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ.
ಇಂದು ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿಯಲಿದೆ. ಟರ್ಮಿನಲ್-1ರಲ್ಲಿ ದೇಶಿಯ ವಿಮಾನಗಳ ಹಾರಾಟ ಮಾತ್ರ ನಡೆಸಲಾಗುವುದು.
ಟರ್ಮಿನಲ್ 2ರಲ್ಲಿ 27 ವಿದೇಶಿ ವಿಮಾನಗಳು ಸೇರಿದಂತೆ 2 ದೇಶಿ ವಿಮಾನಗಳು ಮಾತ್ರ ಹಾರಾಟ ನಡೆಸಲಿವೆ.