Tuesday, December 23, 2025

ವೀಕ್‌ಡೇಸ್‌ನಲ್ಲಿ ಪ್ರೊಫೆಸರ್‌, ವೀಕೆಂಡ್‌ನಲ್ಲಿ ಕಳ್ಳಿ: ಮದುವೆ ಮನೆಯೇ ಈಕೆಯ ಟಾರ್ಗೆಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಾರದ ದಿನಗಳಲ್ಲಿ ಕಾಲೇಜಿನಲ್ಲಿ ಪಾಠ ಮಾಡುತ್ತಿದ್ದ ಮಹಿಳೆ, ವಾರಾಂತ್ಯದಲ್ಲಿ ಮದುವೆ ಮನೆಯನ್ನು ಗುರಿಯಾಗಿಸಿಕೊಂಡು ಕಳವು ನಡೆಸುತ್ತಿದ್ದ ಅಚ್ಚರಿಯ ಪ್ರಕರಣ ಬಸವನಗುಡಿಯಲ್ಲಿ ಬೆಳಕಿಗೆ ಬಂದಿದೆ. ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಕನ್ನಡ ಪ್ರಾಧ್ಯಾಪಕಿ ರೇವತಿಯನ್ನು ಬಸವನಗುಡಿ ಪೊಲೀಸರು ಬಂಧಿಸಿದ್ದು, ಆಕೆಯ ಎರಡು ಮುಖದ ಜೀವನ ಇದೀಗ ಬಹಿರಂಗವಾಗಿದೆ.

ಮೂಲತಃ ಶಿವಮೊಗ್ಗ ಜಿಲ್ಲೆಯವಳಾದ ರೇವತಿ, ಬೆಂಗಳೂರಿನ ಕೆ.ಆರ್.ಪುರಂ ಪ್ರದೇಶದಲ್ಲಿ ವಾಸವಾಗಿದ್ದು, ಬೆಳ್ಳಂದೂರು ಸಮೀಪದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರೊಫೆಸರ್ ಆಗಿ ಕೆಲಸ ಮಾಡುತ್ತಿದ್ದಳು.

ವೀಕ್‌ಡೇಗಳಲ್ಲಿ ನಿಯಮಿತವಾಗಿ ತರಗತಿಗಳನ್ನು ನಡೆಸುತ್ತಿದ್ದ ಈಕೆ, ಭಾನುವಾರ ಬಂದಾಗ ಸಂಬಂಧಿಕರಂತೆ ಮದುವೆ ಕಲ್ಯಾಣಮಂಟಪಗಳಿಗೆ ಪ್ರವೇಶಿಸುತ್ತಿದ್ದಳು. ಯಾರಿಗೂ ಅನುಮಾನ ಬಾರದಂತೆ ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡಿ, ಮದುವೆ ಮನೆಯವರ ಚಿನ್ನಾಭರಣವನ್ನು ಕದಿಯುತ್ತಿದ್ದಳು.

ನವೆಂಬರ್ 25ರಂದು ಬಸವನಗುಡಿಯ ದ್ವಾರಕನಾಥ್ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಈಕೆ ಇದೇ ರೀತಿ ಪ್ರವೇಶಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಳು.

ಇದೀಗ ಪೊಲೀಸರು ಆಕೆಯನ್ನು ಬಂಧಿಸಿ,ಆಕೆಯ ಬಳಿಯಿಂದ 32 ಲಕ್ಷ ರೂ. ಮೌಲ್ಯದ 262 ಗ್ರಾಂ ಚಿನ್ನಾಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ.

error: Content is protected !!