ಹೊಸದಿಗಂತ ಡಿಜಿಟಲ್ ಡೆಸ್ಕ್:ಹೈಕೋರ್ಟ್
ಬಿಟ್ ಕಾಯಿನ್ ಪ್ರಕರಣ (Bitcoin Case) ಸಂಬಂಧ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ, ಹೇಮಂತ್ ಮುದ್ದಪ್ಪ ಅವರಿ ಹೈಕೋರ್ಟ್ (Karnataka High Court) ತಾತ್ಕಾಲಿಕ ರಿಲೀಫ್ ನೀಡಿದೆ.
ಮುಂದಿನ ದಿನಾಂಕದವರೆಗೆ ಕೋರ್ಟ್ಗೆ ಖುದ್ದು ಹಾಜರಿಯಿಂದ ವಿನಾಯಿತಿ ನೀಡಿದ ಏಕಸದಸ್ಯ ಪೀಠ, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿತು.
ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಐಡಿ ಎಫ್ಐಆರ್ ಪ್ರಶ್ನಿಸಿ ತನಿಖೆಗೆ ತಡೆ ನೀಡುವಂತೆ ಕೋರಿ ಡಿವೈಎಸ್ಪಿ ಶ್ರೀಧರ್ ಕೆ ಪೂಜಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ನಲ್ಲಿ ಆರೋಪಿ ಅಧಿಕಾರಿಗಳ ಹೆಸರು ನಮೂದಿಸಿಲ್ಲ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ವಾದ ,ಪ್ರತಿವಾದ ಆಲಿಸಿದ ನ್ಯಾ. ಹೇಮಂತ್ ಚಂದನ್ ಗೌಡರ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಸಾಕ್ಷಾಧಾರವಿಲ್ಲದೇ ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ತೆಗೆದುಕೊಳ್ಳಬಾರದು ಎಂದು ಸಿಐಡಿ ಪೊಲೀಸರಿಗೆ ಸೂಚನೆ ನೀಡಿದರು.