ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು (Rahul Gandhi) ವಿದೇಶೀ ನೆಲದಲ್ಲಿ ಹಿಂದುತ್ವದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದು,ಈ ಸಂಬಂಧ ಅವರು ಕ್ಷಮೆ ಕೇಳಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B.S Yediyurappa) ಆಗ್ರಹಿಸಿದ್ದಾರೆ.
ಇಂದು ಮಲ್ಲೇಶ್ವರದ (Malleshwara) ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, 100 ದಿನಗಳಲ್ಲಿ ಸಿದ್ದರಾಮಯ್ಯನವರ (Siddaramaiah) ಸರ್ಕಾರವು ಜನಪ್ರಿಯತೆ ಕಳೆದುಕೊಂಡಿದೆ. ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಸಿದ್ದರಾಮಯ್ಯನವರ ಸರ್ಕಾರದ ಜನವಿರೋಧಿ ನೀತಿಯನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದ್ದಾರೆ.
ಇದೇ 18ರಿಂದ ಕುರುಡುಮಲೆಯಿಂದ ಬಿಜೆಪಿಯ ರಾಜ್ಯಾದ್ಯಂತ ರಾಜಕೀಯ ಪ್ರವಾಸ ಆರಂಭವಾಗಲಿದೆ. ಇಡೀ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.